ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ಅಟ್ಯಾಕ್ ಬಗ್ಗೆ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.
ಪಹಲ್ಗಾಮ್ ಉಗ್ರ ದಾಳಿಯ ನಂತರ ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ಪ್ರಚೋದನಕಾರಿ ಪೋಸ್ಟ್‌ಗಳು ದೇಶದ ಏಕತೆಗೆ ಹಾನಿ ಉಂಟುಮಾಡಬಹುದು ಎಂಬ ದೂರಿನ ಅನ್ವಯ ಕೇಸ್ ದಾಖಲಾಗಿದೆ.
ಇಂತಹ ಪರಿಸ್ಥಿತಿಯಲ್ಲಿ, ಗಾಯಕಿ ಮತ್ತು ಕವಯಿತ್ರಿ ನೇಹಾ ಸಿಂಗ್ ರಾಥೋಡ್ ಅವರು ತಮ್ಮ ಟ್ವಿಟರ್ ಹ್ಯಾಂಡಲ್ @nehafolksinger ಬಳಸಿಕೊಂಡು ರಾಷ್ಟ್ರೀಯ ಸಮಗ್ರತೆ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಕೆಲವು ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಮಾಡಿದ್ದಾರೆ ಮತ್ತು ಧರ್ಮದ ಆಧಾರದ ಮೇಲೆ ಒಂದು ಸಮುದಾಯವನ್ನು ಮತ್ತೊಂದು ಸಮುದಾಯವನ್ನು ಪ್ರಚೋದಿಸಲು ಪದೇ ಪದೇ ಯತ್ನಿಸಿದ್ದಾರೆ ಎಂದು ದೂರುದಾರ ಅಭಯ್ ಪ್ರತಾಪ್ ಸಿಂಗ್ ಆರೋಪಿಸಿದ್ದಾರೆ.
ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಜಾನಪದ ಗಾಯಕಿಯ ವಿರುದ್ಧ ಹಲವಾರು ಆರೋಪಗಳ ಮೇಲೆ ಲಖನೌದ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.