ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿಕೆ ಶಿವಕುಮಾರ್​​ಗೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕೆಪಿಸಿಸಿ ಅಧ್ಯಕ್ಷರಿಗೆ ಸಂಕಷ್ಟ ಎದುರಾಗಿದ್ದು, ಅಕ್ರಮ ಹಣ ವರ್ಗಾವಣೆ ಕೇಸ್​​ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ಗೆ ದೆಹಲಿ ಕೋರ್ಟ್​ನಿಂದ ಸಮನ್ಸ್ ಜಾರಿಯಾಗಿದೆ.
ಜಾರಿ ನಿರ್ದೇಶನಾಲಯದಿಂದ ಆರೋಪ ಪಟ್ಟಿ ದಾಖಲಾಗಿರುವ ಬೆನ್ನಲ್ಲೇ ಈ ಸಮನ್ಸ್ ಜಾರಿ ಮಾಡಲಾಗಿದೆ.
2018ರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ದಾಖಲಾಗಿರುವ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ನ್ಯಾಯಾಲಯ ಇಂದು ಸಮನ್ಸ್ ನೀಡಿದ್ದು, ಜುಲೈ 1ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.
ಡಿಕೆ ಶಿವಕುಮಾರ್ ಜೊತೆಗೆ ಸಚಿನ್‌ ನಾರಾಯಣ್‌, ಸುನೀಲ್‌ ಕುಮಾರ್‌ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರಗೆ ಸಮನ್ಸ್‌ ನೀಡಲಾಗಿದೆ. ಜೂನ್‌ 1ರಂದು ಕೋರ್ಟ್‌ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಕಳೆದ ವಾರ ಡಿಕೆಶಿ ಮತ್ತು ಇತರ ನಾಲ್ವರು ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಾರ್ಟ್​ಶೀಟ್ ಸಲ್ಲಿಕೆ ಮಾಡಿದ್ದರು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈ ಹಿಂದೆ 2019ರ ಸೆಪ್ಟೆಂಬರ್ ತಿಂಗಳಲ್ಲಿ ಡಿಕೆಶಿ ಬಂಧನವಾಗಿದ್ದರು. ಇದಾದ ಬಳಿಕ ಅಕ್ಟೋಬರ್ 23 ರಂದು ದೆಹಲಿ ಹೈಕೋರ್ಟ್​ನಿಂದ ಜಾಮೀನು ಪಡೆದು, ಹೊರಗೆ ಬಂದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!