ವಿದ್ಯಾರ್ಥಿನಿಯ ಮೇಲೆ ಬಸ್ ಹರಿದ ಪ್ರಕರಣ: ಬಿಎಂಟಿಸಿ ಚಾಲಕ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಘಟನೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ‌ಪ್ರತಿಭಟನೆ ನಡೆಸಿದ್ದರು. ಚಾಲಕ ಸುರೇಶ್ ನನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಯುವತಿಯನ್ನು ಗಮನಿಸದೇ ಚಾಲಕ ಬಸ್ ಮುಂದಕ್ಕೆ ಚಲಾಯಿಸಿ ಅಜಾಗರೂಕತೆ ತೋರಿದ್ದಾನೆ. ಈ ಹಿನ್ನೆಲೆ ಯುವತಿ ಸೊಂಟದ ಮೇಲೆ ಬಸ್ ಹರಿದಿದ್ದು,ಕೋಲಾರ ಮೂಲದ ಶಿಲ್ಪ ಎಂಬ ವಿದ್ಯಾರ್ಥಿನಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!