ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪತ್ತೆ ಕೇಸ್: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಕೊಲೆ ಹಾಗೂಗುಟ್ಟಾಗಿ ಮೃತದೇಹಗಳನ್ನ ಹೂತು ಹಾಕಿರುವ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸದ್ಯಕ್ಕೆ ಎಸ್​ಐಟಿ (SIT) ರಚನೆ ಮಾಡಲ್ಲ ಎಂದಿದ್ದಾರೆ.

ಮೈಸೂರಿನಲ್ಲಿ ಇದೇ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, . ಯಾರೋ ಹೇಳಿದ್ರು ಅಂತ ಎಸ್. ಐ. ಟಿ ರಚನೆ ಮಾಡಲು ಆಗೋದಿಲ್ಲ. ಪೊಲೀಸರು ಸದ್ಯ ತನಿಖೆ ನಡೆಸುತ್ತಿದ್ದಾರೆ. ತನಿಖೆ ಬಳಿಕ ಅಗತ್ಯವಿದ್ರೆ ಎಸ್. ಐ. ಟಿ ರಚನೆ ಮಾಡ್ತೀವಿ. ನಮಗೆ ಯಾರಿಂದಲೂ ಒತ್ತಡ ಬಂದಿಲ್ಲ. ಒತ್ತಡ ಬಂದ್ರೂ ನಾವು ಕೇರ್ ಮಾಡೋದಿಲ್ಲ ಹೇಳಿದ್ದಾರೆ.

ಧರ್ಮಸ್ಥಳ ಗ್ರಾಮದ ಅರಣ್ಯ ಪ್ರದೇಶಗಳಲ್ಲಿ ಅಕ್ರಮವಾಗಿ ಹಲವು ಶವಗಳನ್ನು ಹೂತಿಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ವ್ಯಕ್ತಿಯೋರ್ವ ತಾನೇ ಶವ ಹೂತಿಟ್ಟುದ್ದು ಎಂದು ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ ಎನ್ನಲಾಗ್ತಿದೆ. ಈ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!