ವಾಹನ ಅಡ್ಡಗಟ್ಟಿ ಮೊಬೈಲ್ ಕಸಿದ ಪ್ರಕರಣ: ಇಬ್ಬರು ಪೊಲೀಸ್ ವಶಕ್ಕೆ

ಹೊಸದಿಗಂತ ವರದಿ ಕುಶಾಲನಗರ:

ಕೇರಳ ಮೂಲದವರ ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಮೊಬೈಲ್ ಕಸಿದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನವೆಂಬರ್. 12ರ ರಾತ್ರಿ ಕಾಸರಗೋಡಿನ ಲೋಹಿತ್ ದಾಸ್ ಹಾಗೂ ಜೈಸಿತ್ ಎಂಬವರು ಬೆಂಗಳೂರಿನಿಂದ ಕಾಸರಗೋಡಿಗೆ ತೆರಳುವ ಮಾರ್ಗ ಮಧ್ಯೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆಹೊಸೂರು ಬಳಿ ಆರು ಮಂದಿಯ ತಂಡ ಕಾರನ್ನು ಅಡ್ಡಗಟ್ಟಿತೆನ್ನಲಾಗಿದೆ.

ಈ ಸಂದರ್ಭ ವಾಹನದಲ್ಲಿದ್ದವರ ಮೇಲೆ ಹಲ್ಲೆ ನಡೆಸಿ ಮೊಬೈಲ್ ಕಸಿದುಕೊಂಡ ತಂಡ ಅವರದ್ದೇ ವಾಹನ ಚಲಾಯಿಸಿಕೊಂಡು ಹೋಗುವ ಸಂದರ್ಭ ಕಾರು ಅಪಘಾತಕ್ಕೀಡಾಗಿದೆ. ಅವಘಡದಲ್ಲಿ ಸಣ್ಣಪುಟ್ಟ ಗಾಯಗೊಂಡ ಆರೋಪಿಗಳು ಕುಶಾಲನಗರ ಸಮುದಾಯದ ಅರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ತೆರಳಿದ್ದಾರೆ.

ಈ ಸಂಬಂಧ ಮಾದಾಪಟ್ಟಣದ ವಿನು ಹಾಗೂ ದಿನು ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಉಳಿದ ನಾಲ್ವರ ಪತ್ತೆಗೆ ಕ್ರಮಕೈಗೊಂಡಿದ್ದಾರೆ. ಅಲ್ಲದೆ ಕೃತ್ಯಕ್ಕೆ ಬಳಸಿದ ಬಿಳಿ ಕೊರೊಲ ಕಾರನ್ನೂ ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕೇರಳದವರ ವ್ಯಾಗನಾರ್ ಕಾರು ಅಪಘಾತದಲ್ಲಿ ಜಖಂಗೊಂಡಿದೆ.

ಸಂಪೂರ್ಣ ತನಿಖೆ ಬಳಿಕ ಘಟನೆಯ ಸಂಪೂರ್ಣ ವಿವರ ಹಾಗೂ ಕೃತ್ಯದ ಉದ್ದೇಶ ಬಹಿರಂಗವಾಗಲಿದೆ ಎಂದು ಕುಶಾಲನಗರ ಗ್ರಾಮಾಂತರ ಠಾಣೆಗೆ ಭೇಟಿ‌ ನೀಡಿ ಆರೋಪಿಗಳ ವಿಚಾರಣೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!