ಹೊಸದಿಗಂತ ವರದಿ, ಬಳ್ಳಾರಿ:
ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಭಾನುವಾರ ನಗರದ ವಿಮ್ಸ್ ಆಸ್ಪತ್ರೆ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸರೆಡ್ಡಿ,, ಡಿ ಎಚ್ ಒ ಡಾ.ರಮೇಶ್ ಬಾಬು ಅವರೊಂದಿಗೆ ಜಿಲ್ಲಾಸ್ಪತ್ರೆಯ ವಿವಿಧ ವಾರ್ಡ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ರೋಗಿಗಳಿಂದ ವ್ಯವಸ್ಥೆ ಹಾಗೂ ಸ್ವಚ್ಚತೆ ಬಗ್ಗೆ ಮಾಹಿತಿ ಪಡೆದರು. ನಂತರ ಕೆಲ ಕಾಲ ಅಧಿಕಾರಿಗಳೊಂದಿಗೆ ಪ್ರಕರಣದ ಮಾಹಿತಿ ಪಡೆದರು. ನಂತರ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯ ನಿರ್ದೇಶಕ ಡಾ.ಗಂಗಾಧರ ಗೌಡ ಅವರೊಂದಿಗೆ ವಾರ್ಡ್ ಗಳಿಗೆ ಭೇಟಿ ನೀಡಿ ರೋಗಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೊಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ, ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ರಾಜ್ಯ ಕಾರ್ಯದರ್ಶಿ ಕೆ. ಎಸ್.ದಿವಾಕರ್, ಡಾ. ಮಹಿಪಾಲ್, ಮಾಜಿ ಸoಸದ ಸಣ್ಣ ಫಕೀರಪ್ಪ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಗಣಪಲ್ ಐನಾಥ್ ರೆಡ್ಡಿ, ಎಸ್ಪಿ ಡಾ.ಶೋಭಾ ರಾಣಿ ಸೇರಿದಂತೆ ಇತರರಿದ್ದರು.