ಹುಲಿ ಉಗುರು ಧರಿಸಿದ ಪ್ರಕರಣ: ಅರಣ್ಯ ಸಚಿವ ಈಶ್ವರ್ ಖಂಡ್ರೆ ರಿಯಾಕ್ಷನ್ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ರಾಜಕಾರಣಿಗಳು ಸೇರಿದಂತೆ ಸ್ಯಾಂಡಲ್‌ವುಡ್ ನಟರು ಹುಲಿ ಉಗುರು ಸಂಕಷ್ಟ ತಂದಿಟ್ಟಿದ್ದು, ಅರಣ್ಯ ಇಲಾಖೆಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಈ ಮಧ್ಯೆ ಸ್ವತಃ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಪ್ರತಿಕ್ರಿಯಿಸಿದ್ದು, ವನ್ಯ ಜೀವಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ. ಪ್ರತ್ಯಕ್ಷವಾಗಿ ಇಲ್ಲವೇ ಪರೋಕ್ಷವಾಗಿ ವನ್ಯಜೀವಿಗಳಿಗೆ ತೊಂದರೆ, ಹಾನಿ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ಅದು ವನ್ಯ ಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿದಂತಾಗುತ್ತದೆ.

ವನ್ಯ ಜೀವಿ ಚರ್ಮ, ಉಗುರು ಇನ್ನಿತರ ದೇಹದ ಭಾಗಗಳ ಬಳಕೆ, ಸಾಗಾಣೆ, ಸಂಗ್ರಹಿಸಿ ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ನೆಲದಲ್ಲಿ ಕಾನೂನು ಎಲ್ಲರಿಗೂ ಸಮಾನವಾಗಿದೆ. ಹುಲಿ ಉಗುರು (Tiger Claw) ಬಗ್ಗೆ ನೈಜತೆ ಲಭ್ಯವಾದಲ್ಲಿ ಇಲಾಖೆ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!