Wednesday, October 29, 2025

ಧರ್ಮಸ್ಥಳ ಸಮಾಧಿ ಶೋಧ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲರ ವಿರುದ್ಧ ಪ್ರಕರಣ ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳದಲ್ಲಿ ಶವ ಹೂತಿಡಲಾಗಿದೆ ಎಂಬ ದೂರಿಗೆ ಸಂಬಂಧಿಸಿ ಎಸ್‌ಐಟಿ ನಡೆಸುತ್ತಿದ್ದ ಸಮಾಧಿ ಶೋಧ ತನಿಖೆಗೆ ಸಂಬಂಧಿಸಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ ವಕೀಲ ಮಂಜುನಾಥ ಎನ್. ಎಂಬವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬೆಳ್ತಂಗಡಿ ತಾಲೂಕು ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ ಎಂಬವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಜುನಾಥ್, ಎಸ್‌ಐಟಿ ನಡೆಸುತ್ತಿದ್ದ ಮೃತದೇಹಗಳ ಉತ್ಖನನ ಪ್ರಕ್ರಿಯೆಗೆ ಸಂಬಂಧಿಸಿ ಜು.30 ರಂದು ತಾನು ಓರ್ವ ವಕೀಲನಾಗಿ, ಸಾರ್ವಜನಿಕರ ನೆಮ್ಮದಿಗೆ ದಕ್ಕೆಯಾಗುವಂತಹ ಹಾಗೂ ಭಯವುಂಟು ಮಾಡುವಂತಹ ಅನಧಿಕೃತ ಮಾಹಿತಿಗಳನ್ನು ಒಳಗೊಂಡಿರುವ ಸುಳ್ಳು ಪತ್ರಿಕಾ ಪ್ರಕಟಣೆಯನ್ನು ಪ್ರಸಾರ ಮಾಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗುವಂತೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಅ.ಕ್ರ: 96/2015, ಕಲಂ:353 (1)(b), 353 (2) ಬಿಎನ್‌ಎಸ್‌ನಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

error: Content is protected !!