Saturday, December 9, 2023

Latest Posts

ಜನಸೇನಾ ನಾಯಕ ಪವನ್‌ ಕಲ್ಯಾಣ್‌ ವಿರುದ್ಧ ಅನುಚಿತ ಕಾಮೆಂಟ್‌: ಪೋಸಾನಿ ಕೃಷ್ಣ ಮುರಳಿ ವಿರುದ್ಧ ಕೇಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪೋಸಾನಿ ಕೃಷ್ಣ ಮುರಳಿ ತೆಲುಗು ಸಿನಿಮಾ ರಂಗದಲ್ಲಿ ಬರಹಗಾರರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿ, ಸ್ಟಾರ್ ಸ್ಥಾನಮಾನವನ್ನು ಗಳಿಸಿದರು. ತ್ರಿವಿಕ್ರಮ್ ಶ್ರೀನಿವಾಸ್ ಮತ್ತು ಕೊರಟಾಲ ಶಿವ ಅವರಂತಹ ಸ್ಟಾರ್ ನಿರ್ದೇಶಕರು ಅವರ ಶಿಷ್ಯರಾಗಿ ಕೆಲಸ ಮಾಡಿದ್ದರು. ಪೋಸಾನಿ ಕೃಷ್ಣ ಮುರಳಿ ನಟನಾಗಿಯೂ ಹಲವು ವಿಶಿಷ್ಟ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಇತ್ತೀಚೆಗಷ್ಟೇ ಎಪಿ ಸರ್ಕಾರ ಕೃಷ್ಣ ಮುರಳಿಗೆ ಎಪಿ ಚಲನಚಿತ್ರ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಇದೀಗ ಪೂರ್ವ ಗೋದಾವರಿ ಜಿಲ್ಲೆಯ ರಾಜಮಹೇಂದ್ರವರಂ ಪೊಲೀಸ್ ಠಾಣೆಯಲ್ಲಿ ಪೋಸಾನಿ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಪವರ್ ಸ್ಟಾರ್ ಪವನ್ ಕಲ್ಯಾಣ್ ಮೇಲೆ ಅನುಚಿತ ವ್ಯಾಖ್ಯಾನಗಳನ್ನು ಮಾಡಿದ್ದರು ಎಂಬ ಆರೋಪದ ಮೇಲೆ ಪೊಲೀಸ್ ಠಾಣೆಯಲ್ಲಿ ಜನಸೇನಾ ಕಾರ್ಯಕರ್ತರು ದೂರು ದಾಖಲಿಸಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದ ಕಾರಣ ಕಾರ್ಯಕರ್ತರು ನ್ಯಾಯಾಲಯದ ಮೊರೆ ಹೋಗಿದ್ದರು.

ಇದೀಗ ಪೋಸಾನಿ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಕೋರ್ಟ್ ಸೂಚಿಸಿದೆ. ನ್ಯಾಯಾಲಯದ ಆದೇಶದಂತೆ ಪೊಲೀಸರು ಪೋಸಾನಿ ವಿರುದ್ಧ ಐಪಿಸಿ ಸೆಕ್ಷನ್ 354, 355, 500, 504, 506, 507, 509 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 2009ರ ಚುನಾವಣೆ ವೇಳೆ ಚಿರಂಜೀವಿ ಸ್ಥಾಪಿಸಿದ್ದ ಪ್ರಜಾರಾಜ್ಯಂ ಸೇರಿದ ಪೋಸಾನಿ, ಆ ಚುನಾವಣೆಯಲ್ಲಿ ಪ್ರಜಾರಾಜ್ಯಂನಿಂದ ಸ್ಪರ್ಧಿಸಿದ್ದರು. ನಂತರ ವೈಸಿಪಿ ಶುರುವಾದ ಬಳಿಕ ಜಗನ್‌ನತ್ತ ಮುಖ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!