ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿಯಲ್ಲಿ ವಿವಾದಾತ್ಮಕ ಭಾಷಣ ಮಾಡಿದ ಆರೋಪದಡಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಇಲ್ಲಿನ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಏ. 7 ರಂದು ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್, ದಿವಂಗತ ಬಾಳಾಸಾಹೇಬ ಠಾಕ್ರೆ ಮನೆಯಲ್ಲಿ ಮಹಮ್ಮದ್ ಪೈಗಂಬರ್ ಹುಟ್ಟಿದ್ದಾರೆ ಎಂದು ಮಾತನಾಡಿದ್ದು, ಅಪಮಾನಕಾರಿಯಾಗಿದೆ ಎಂದು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದೆ.