Friday, December 26, 2025

ರ‍್ಯಾಲಿ ವೇಳೆ ಕಾಲ್ತುಳಿತ ದುರಂತ ಸಂಬಂಧ ಕೇಸ್‌ ದಾಖಲು: ಪ್ರಾಥಮಿಕ ತನಿಖೆ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಕರೂರಿನಲ್ಲಿ ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಆಯೋಜಿಸಿದ್ದ ಚುನಾವಣಾ ಪ್ರಚಾರದ ರ‍್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿ ದುರಂತವೇ ನಡೆದುಹೋಗಿದೆ. ಘಟನೆಯಲ್ಲಿ ಮೃತಪಟ್ಟ 39 ಜನರ ಪೈಕಿ 35 ಮಂದಿ ಮೃತದೇಹಗಳ ಗುರುತು ಪತ್ತೆಯಾಗಿದೆ.

ಗುರುತು ಪತ್ತೆಯಾದವರಲ್ಲಿ ಕರೂರು ಜಿಲ್ಲೆಯವರು 28 ಜನ, ಈರೋಡ್, ತಿರುಪುರ, ಧಾರಾಪುರಂ ಜಿಲ್ಲೆಗಳ ತಲಾ ಇಬ್ಬರು, ಸೇಲಂ ಜಿಲ್ಲೆಯ ಒಬ್ಬರ ಗುರುತು ಪತ್ತೆಯಾಗಿದೆ. ಉಳಿದ 4 ಶವಗಳನ್ನು ಗುರುತಿಸುವ ಕಾರ್ಯವನ್ನು ಸ್ಥಳೀಯ ಪೊಲೀಸರು ಮಾಡುತ್ತಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಳಿಸಿಕೊಂಡಿದ್ದು, ಪ್ರಾಥಮಿಕ ತನಿಖೆ ಶುರು ಮಾಡಲಾಗಿದೆ ಎಂದು ಕೂಡ ಎಡಿಜಿಪಿ ತಿಳಿಸಿದ್ದಾರೆ.

error: Content is protected !!