ಲಾಕ್​ಡೌನ್ ಸಮಯದಲ್ಲಿ ದಾಖಲಾದ ಕೇಸ್ ವಾಪಾಸ್: ‘ಮಹಾ’ ಸರಕಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೊರೋನಾ ದೇಶದಲ್ಲಿ ಹೆಚ್ಚಾದ ಸಮಯದಲ್ಲಿ ಎಲ್ಲೆಡೆ ನಿಯಂತ್ರಣಕ್ಕೆ ಲಾಕ್​ಡೌನ್ ಜಾರಿ ಮಾಡಲಾಗಿತ್ತು. ಈ ವೇಳೆ ಜನರು ಲಾಕ್​ಡೌನ್​ ಉಲ್ಲಂಘಿಸಿದ ಹಿನ್ನೆಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಇದೀಗ ಮಹಾರಾಷ್ಟ್ರ ಸರ್ಕಾರ ಲಾಕ್​ಡೌನ್​ ಸಮಯದಲ್ಲಿ ನಿಯಮ ​ ಉಲ್ಲಂಘನೆಗೆ ಸಂಬಂಧಿಸಿದ ಎಲ್ಲ ಪೊಲೀಸ್​ ಪ್ರಕರಣಗಳನ್ನೂ ಹಿಂಪಡೆಯಲು ನಿರ್ಧರಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಗೃಹ ಸಚಿವ ದಿಲೀಪ್​ ವಾಲ್ಸೆ ಪಾಟೀಲ್, ಮಹಾರಾಷ್ಟ್ರದಲ್ಲಿ ಲಾಕ್​ಡೌನ್​ ಸಂಬಂಧದಲ್ಲಿ ಐಪಿಸಿ 188ರಡಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ವಿರುದ್ಧದ ದಾಖಲಿಸಿ ಪ್ರಕರಣಗಳ ವಾಪಸಾತಿಗೆ ಗೃಹ ಇಲಾಖೆಯ ತೀರ್ಮಾನಿಸಿದೆ. ಈ ಬಗ್ಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದರೆ, ಎಲ್ಲ ಕೇಸ್​ಗಳ ಹಿಂಪಡೆಯುವ ಪ್ರಕ್ರಿಯೆಯನ್ನು ಆರಂಭಿಸುತ್ತೇವೆ ಎಂದು ತಿಳಿಸಿದ್ದಾರೆ.
ದೇಶದಾದ್ಯಂತ ಕೋವಿಡ್​ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ಮಹಾರಾಷ್ಟ್ರದಲ್ಲಿ ಸದ್ಯ ಕೇವಲ 954 ಸಕ್ರಿಯ ಪ್ರಕರಣಗಳು ಮಾತ್ರವೇ ಇವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!