ಜನವರಿ ಮೊದಲ ವಾರದಿಂದ ಸಾರಿಗೆ ನೌಕರರಿಗೆ ನಗದು ರಹಿತ ವೈದ್ಯಕೀಯ ಸೇವೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಾರಿಗೆ ನೌಕರರಿಗೆ ನಗದು ರಹಿತ ವೈದ್ಯಕೀಯ ಸೇವೆ ಒದಗಿಸುವ ಯೋಜನೆಗೆ ರಾಜ್ಯ ಸರ್ಕಾರ ಜನವರಿ ಮೊದಲ ವಾರದಲ್ಲಿ ಚಾಲನೆ ನೀಡಲಿದೆ.

ಈ ಯೋಜನೆಯಡಿ, ಚಾಲಕರು ಮತ್ತು ಕಂಡಕ್ಟರ್‌ಗಳು ಮತ್ತು ಅವರ ಕುಟುಂಬದ ಸದಸ್ಯರು ರಾಜ್ಯದಾದ್ಯಂತ 240 ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ. ಈ ಮೊದಲು ನೌಕರರು ಚಿಕಿತ್ಸೆಗೆ ಮೊದಲು ಹಣವನ್ನು ಪಾವತಿ ಮಾಡಬೇಕಿತ್ತು. ನಂತರ ಹಣವನ್ನು ಮರುಪಾವತಿ ಮಾಡಲಾಗುತ್ತಿತ್ತು. ಯೋಜನೆಯಡಿ ಇದೀಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಗೊತ್ತುಪಡಿಸಿದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ “ಕಾರ್ಡ್” ಮೂಲಕ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ನಗದು ರಹಿತ ಚಿಕಿತ್ಸಾ ಸೌಲಭ್ಯ ಒದಗಿಸುವಂತೆ ಮನವಿಗಳು ಬಂದಿದ್ದವು. ಹೀಗಾಗಿ ಸರ್ಕಾರ ಸಾರಿಗೆ ನೌಕರರ ಅನುಕೂಲಕ್ಕಾಗಿ ಹಲವು ಹೊಸ ಉಪಕ್ರಮಗಳನ್ನು ಪರಿಚಯಿಸುತ್ತಿದೆ. ಈ ಯೋಜನೆಯಡಿ ನೌಕರರಿಗೆ “ಕಾರ್ಡ್” ನೀಡಲಾಗುವುದು, ಕಾರ್ಡ್ ಮೂಲಕ ರಾಜ್ಯದಾದ್ಯಂತ 240 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಹಣ ಪಾವತಿಸಬೇಕಾಗಿಲ್ಲ ಎಂದು ಹೇಳಿದರು.

ಈ ಯೋಜನೆಯನ್ನು ಮೊದಲು ಕೆಎಸ್‌ಆರ್‌ಟಿಸಿ ನೌಕರರಿಗೆ ಪರಿಚಯಿಸಲಾಗುವುದು. ನಂತರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಗೂ ವಿಸ್ತರಿಸಲಾಗುವುದು ಎಂದು ತಿಳಿಸಿದರು.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!