ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ ನೀಡಲು ಸರ್ಕಾರವು ಯೋಜನೆ ರೂಪಿಸಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಲೋಕಸಭೆಗೆ ಲಿಖಿತ ಉತ್ತರ ನೀಡಿದ ಅವರು , ಈಗಾಗಲೇ ಚಂಡೀಗಢ ಮತ್ತು ಅಸ್ಸಾಂನಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಯುಷ್ಮಾನ್‌ ಭಾರತ್‌ ಪ್ರಧಾನ ಮಂತ್ರಿ-ಜನಾರೋಗ್ಯ ಯೋಜನೆಯಡಿ ಸೇರ್ಪಡೆಯಾಗಿರುವ ಆಸ್ಪತ್ರೆಗಳಲ್ಲಿ ಗಾಯಾಳುಗಳನ್ನು ಚಿಕಿತ್ಸೆಗೆ ದಾಖಲಿಸಲಾಗುತ್ತದೆ. ಅವಘಡ ಸಂಭವಿಸಿದ ದಿನದಿಂದ ಏಳು ದಿನಗಳವರೆಗೆ ಗರಿಷ್ಠ ₹1.5 ಲಕ್ಷದವರೆಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಭಾರತೀಯ ಆರೋಗ್ಯ ಪ್ರಾಧಿಕಾರದ ಸಹಭಾಗಿತ್ವದಡಿ ವಾಹನ ಅಪಘಾತದಿಂದ ಗಾಯಗೊಂಡವರಿಗೆ ಈ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೋಟರ್‌ ವಾಹನಗಳ ಕಾಯ್ದೆ 1988ರ ಅಡಿ ರಚಿಸಿರುವ ಮೋಟರ್‌ ವಾಹನ ಅಪಘಾತ ನಿಧಿಯಡಿ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!