ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಶಾಸಕ ಮುನಿರತ್ನ ಅವರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಎಸ್ಐಟಿಯು ಜಾತಿ ನಿಂದನೆ ಕೇಸ್ ಸಂಬಂಧ ಚಾರ್ಜ್ ಶೀಟ್ ಅನ್ನು ಸಲ್ಲಿಸಿದೆ.
ಬಿಜೆಪಿ ಶಾಸಕ ಮುನಿರತ್ನ ಅವರು ಗುತ್ತಿಗೆದಾರರೊಬ್ಬರಿಗೆ ಜಾತಿ ನಿಂದನೆ ಮಾಡಿದ ಸಂಬಂಧ ದೂರು ದಾಖಲಾಗಿತ್ತು. ಅವರು ಜಾತಿ ನಿಂದನೆ ಮಾಡಿರುವ ಆಡಿಯೋ ಕೂಡ ಅವರದ್ದೇ ಎಂಬುದಾಗಿ ಎಫ್ಎಸ್ಐ ಎಲ್ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎನ್ನಲಾಗಿತ್ತು.
ಇನ್ನೂ ರಾಜ್ಯ ಸರ್ಕಾರವು ಶಾಸಕ ಮುನಿರತ್ನ ವಿರುದ್ಧದ ಜಾತಿ ನಿಂದನೆ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿತ್ತು. ಈ ಪ್ರಕರಣ ತನಿಖೆ ನಡೆಸಿದ್ದ ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.