ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತಿನಿಂದನೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಸಿಕ್ಕಿದೆ.
ಬುಧವಾರ ವಾದ, ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಎರಡು ಲಕ್ಷ ರೂ. ಬಾಂಡ್, ಇಬ್ಬರು ಶ್ಯೂರಿಟಿ, ಪೊಲೀಸರು ವಿಚಾರಣೆಗೆ ಕರೆದಾಗ ಹಾಜರಾಗಬೇಕೆಂದು ಕೋರ್ಟ್ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.
ಜಾಮೀನು ಸಿಕ್ಕಿದರೂ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಮುನಿರತ್ನ ಅವರನ್ನು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆಯಿದೆ.