August 13, 2026
Thursday, August 13, 2026
spot_img

ಮಾಜಿ ರಾಜ್ಯಸಭಾ ಸದಸ್ಯ ಎಚ್. ಹನುಮಂತಪ್ಪ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ರಾಜ್ಯಸಭಾ ಸದಸ್ಯ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರ ರೇಷ್ಮೆ ಮಂಡಳಿಯ ಮಾಜಿ ಅಧ್ಯಕ್ಷ ಎಚ್. ಹನುಮಂತಪ್ಪ ಅವರು ಭಾನುವಾರ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಎಚ್. ಹನುಮಂತಪ್ಪ ಅವರು ಮೂರು ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಪರಿಶಿಷ್ಟ ಜಾತಿ ಸಮುದಾಯದ ಪ್ರಮುಖ ನಾಯಕರಾಗಿದ್ದ ಅವರು ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಹನುಮಂತಪ್ಪ ಅವರ ಸೇವೆ ಮತ್ತು ಸಮಾಜಮುಖಿ ಕೊಡುಗೆಯನ್ನು ಸ್ಮರಿಸಿರುವ ಸಿಎಂ, ಅವರ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !