ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಜನಗಣತಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಉಂಟಾದ ಜಾತಿ ಗೊಂದಲವನ್ನು ಪರಿಹರಿಸುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಯಾವುದೇ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳದೆ ಸುರಕ್ಷಿತ ರೀತಿಯಲ್ಲಿ ವರ್ತಿಸುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಇದರಂತೆ ವರದಿಯನ್ನು ಅಧ್ಯಯನ ಮಾಡಲು ಸಚಿವ ಸಂಪುಟವು ಉಪ ಸಮಿತಿಯನ್ನು ಅಥವಾ ನಿವೃತ್ತ ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ರಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಇಲ್ಲದೆ, ವರದಿ ಕುರಿತು ಚರ್ಚಿಯಲು ವಿಶೇಷ ಅಧಿವೇಶನವನ್ನೂ ಕರೆಯಬಹುದು ಎಂದು ಮೂಲಗಳು ತಿಳಿಸಿವೆ.
ಹಿಂದುಳಿದ ವರ್ಗಗಳ ಮೀಸಲಾತಿ ಪುನರ್ರಚಿಸಲು ಆಯೋಗದ ಶಿಫಾರಸುಗಳ ಬಗ್ಗೆಯೂ ಸಂಪುಟವು ಚರ್ಚಿಸುವ ಸಾಧ್ಯತೆಯಿದೆ, ಇಂದು ಸಂಜೆ 4ಕ್ಕೆ ವಿಶೇಷ ಸಚಿವ ಸಂಪುಟ ಸಭ ನಡೆಯಲಿದ್ದು, ಯಾವ ತೀರ್ಮಾನ ಹೊರಬೀಳಬಹುದು ಎಂಬ ಕುರಿತು ತೀವ್ರ ಕುತೂಹಲ ನಿರ್ಮಾಣವಾಗಿದೆ.