Sunday, November 2, 2025

ಜಾತಿಗಣತಿ: ಇಂದಿಗೆ ಮುಕ್ತಾಯವಾಯ್ತು ಮನೆ ಮನೆ ಸಮೀಕ್ಷೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮನೆ ಮನೆ ಗಣತಿ ಕಾರ್ಯಕ್ಕೆ ಶುಕ್ರವಾರ ತೆರೆಬೀಳಲಿದ್ದು, ಗಣತಿಯಲ್ಲಿ ಭಾಗವಹಿಸಲು ಸಾಧ್ಯವಾಗದೆ ಇರುವವರಿಗಾಗಿ ನವೆಂಬರ್ 10ರ ವರೆಗೆ ಆನ್ಲೈನ್ ಸಮೀಕ್ಷೆ ಅವಧಿ ವಿಸ್ತರಣೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಇಂದು ಮುಕ್ತಾಯವಾಗಿದೆ.

ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ https://kscbcselfdeclaration.karnataka.gov.in Online ಮೂಲಕ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ದಿನಾಂಕ: 10.11.2025 ರ ವರೆಗೆ ಅಂತಿಮವಾಗಿ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ 80507 70004 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಆಯೋಗ ತಿಳಿಸಿದೆ.

error: Content is protected !!