ಛತ್ತೀಸ್‌ಗಢದಲ್ಲಿ ಮತ್ತೊಮ್ಮೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜಾತಿ ಗಣತಿ: ಪ್ರಿಯಾಂಕಾ ಗಾಂಧಿ ವಾದ್ರಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಛತ್ತೀಸ್‌ಗಢದಲ್ಲಿ ಮತ್ತೊಮ್ಮೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದ್ದಾರೆ.

ಇಲ್ಲಿನ ನಗರಿಯಾ ನಿಕಾಯ್ ಈವಂ ಪಂಚಾಯಿತಿ ರಾಜ್‌ ಮಹಾಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ‘ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಲಕ್ಷ ಮನೆಗಳನ್ನು ನಿರ್ಮಿಸಿಕೊಡುತ್ತೇವೆ’ ಎಂದು ಹೇಳಿದರು.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕಾ, ‘ಕೇಂದ್ರ ಸರ್ಕಾರ ಶ್ರೀಮಂತರ ಪರವಾಗಿದೆ. ಅದಕ್ಕೆ ಬಡ ಮತ್ತು ಮಧ್ಯಮ ವರ್ಗದವರ ಬಗ್ಗೆ ಕಾಳಜಿ ಇಲ್ಲ.ಪ್ರಧಾನಿ ಮೋದಿ ಅವರದ್ದು ಕೇವಲ ಪೊಳ್ಳು ಭರವಸೆ. ಪ್ರತಿಯೊಬ್ಬ ನಾಗರಿಕರ ಬ್ಯಾಂಕ್‌ ಖಾತೆಗೆ 15 ಲಕ್ಷ ಜಮೆ ಮಾಡುತ್ತೇವೆ ಮತ್ತು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂಬ ಅವರ ಗ್ಯಾರಂಟಿ ಏನಾಯಿತು? ಈ ಪ್ರಶ್ನೆ ಕೇಳಿದಾಗಲೆಲ್ಲಾ ಅವರು ಇನ್ನೊಂದು ಗ್ಯಾರಂಟಿ ಘೋಷಣೆ ಮಾಡುತ್ತಾರೆ ಎಂದು ಟೀಕಿಸಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!