ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತಿಗಣತಿ ವರದಿ ತಯಾರು ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಕೇಂದ್ರ ಸರ್ಕಾರಕ್ಕೆ ಮಾತ್ರ ಈ ಅಧಿಕಾರ ಇರುವುದು ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಜಗದ್ಗುರುಗಳು ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಯಾವುದೋ ಒಂದು ಜಾತಿಯನ್ನು ತುಷ್ಟೀಕರಣ ಮಾಡಲು ಜಾತಿಗಣತಿಗೆ ಮುಂದಾಗಿದೆ. ಜಾತಿಗಣತಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಸಂಘ ವಿರೋಧಿಸಿದೆ ಎಂದು ತಿಳಿಸಿದ್ದಾರೆ.
ಜಾತಿಗಣತಿ ವರದಿ ಪುನರ್‌ವಿಮರ್ಶೆ ಆಗಬೇಕು. ಅಧಿಕಾರಿಗಳು ಮನೆಮನೆಗೆ ಭೇಟಿ ಕೊಡಬೇಕು. ಮನೆಮನೆಗೆ ಭೇಟಿ ಕೊಟ್ಟು ಅಧಿಕಾರಿಗಳು ವರದಿ ತಯಾರಿಸಬೇಕು ಎಂದು ಆಗ್ರಹಿಸಿದ್ದಾರೆ.