ಹೊಸದಿಗಂತ ಡಿಜಿಟಲ್ ಡೆಸ್ಕ್:
ನವೆಂಬರ್‌ನಲ್ಲಿ ಜಾತಿಗಣತಿ ವರದಿ ಸಲ್ಲಿಸುವುದಾಗಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿರುವ ಜೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದು, ವರದಿ ಸಲ್ಲಿಕೆಯಾದ ನಂತರ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಮ್ಮದು ಜಾತಿ ವ್ಯವಸ್ಥೆಯನ್ನು ಆಧರಿಸಿದ ಸಮಾಜ, ಎಲ್ಲದರಲ್ಲಿಯೂ ಸಮಾನತೆ ಕೊಡಬೇಕು, ಇದಕ್ಕಾಗಿ ಜಾತಿ ಅಂಕಿ ಅಂಶ ಬೇಕಿದೆ. ಜಾತಿ ಗಣತಿ ಆಗಿದೆ, ನವೆಂಬರ್‌ನಲ್ಲಿ ವರದಿ ಬರಲಿದೆ. ತದನಂತರ ಮುಂದಿನ ತೀರ್ಮಾನ ಮಾಡಲಿದ್ದೇವೆ ಎಂದಿದ್ದಾರೆ.