ನಾಳಿನ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ ಮಾಡಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ದೆಹಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಜಾತಿ ಗಣತಿ ವರದಿಯ ಜಾರಿ ಬಗ್ಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದರು.

ಎಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರ ಭಾಷಣ ಉತ್ತಮವಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಶಂಕುಸ್ಥಾಪನೆಗೊಂಡಿದ್ದ ಕಟ್ಟಡ , ಇಂದು ಸುಸಜ್ಜಿತ ಕಟ್ಟಡವಾಗಿ ಉದ್ಘಾಟನೆಗೊಂಡಿದೆ ಎಂದು ತಿಳಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!