ಜನಗಣತಿಯೊಂದಿಗೆ ಜಾತಿ ಗಣತಿ: ಪ್ರಧಾನಿ ಮೋದಿಯ ದಿಟ್ಟ ನಿರ್ಧಾರ ಎಂದ ಹೆಚ್.ಡಿ. ಕುಮಾರಸ್ವಾಮಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಮೋದಿಯವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ. ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವಾಗಲಿದೆ ಎಂಬುದು ಗಮನಾರ್ಹ ಎಂದಿದ್ದಾರೆ.

ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.

ಈ ದಿಟ್ಟ ಕ್ರಮದೊಂದಿಗೆ ಪ್ರಧಾನಿ ಶ್ರೀ ಮೋದಿ ಅವರು ಸಮಗ್ರ ಆಡಳಿತ ಮತ್ತು ದತ್ತಾಂಶ ಚಾಲಿತ ನೀತಿ ನಿರೂಪಣೆ ಬಗ್ಗೆ ಹೊಂದಿರುವ ತಮ್ಮ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅಲ್ಲದೇ, ಈ ಗಣತಿಯು ಕಲ್ಯಾಣ ಕಾರ್ಯಕ್ರಮಗಳನ್ನು ಬಲಗೊಳಿಸುತ್ತದೆ, ಸಾಮಾಜಿಕ ನ್ಯಾಯವನ್ನು ಇನ್ನಷ್ಟು ಖಚಿತಪಡಿಸುತ್ತದೆ ಹಾಗೂ ಸರ್ವರಿಗೂ ಸಮಾನ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!