ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಚೂರು ಜಿಲ್ಲೆಯಲ್ಲಿ ಬೆಕ್ಕು ಜ್ವರ ಹೆಚ್ಚಾಗಿದ್ದು ಕಳೆದ 15 ದಿನಗಳಲ್ಲಿ ಸುಮಾರು 38 ಬೆಕ್ಕುಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ.
ರಾಯಚೂರಿನಲ್ಲಿ ಇದುವರೆಗೆ 100ಕ್ಕೂ ಹೆಚ್ಚು ಬೆಕ್ಕುಗಳಲ್ಲಿ ಫಿಲೈನ್ ಪ್ಯಾನ್‌ಲೀಕೊಪೇನಿಯಾ ವೈರಸ್ ಪತ್ತೆಯಾಗಿದೆ. ಇದರಲ್ಲಿ 62 ಬೆಕ್ಕುಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡಿವೆ. ಬೆಕ್ಕಿನಿಂದ ಬೇರೆ ಪ್ರಾಣಿಗಳಿಗೆ, ಮನುಷ್ಯರಿಗೆ ವೈರಸ್ ಹರಡುವುದಿಲ್ಲ ಎನ್ನುವುದು ಸಮಾಧಾನಕರ ಸಂಗತಿಯಾಗಿದೆ.