ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಯಶಸ್ವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಆಸ್ಪತ್ರೆಯಿಂದ ರಾಷ್ಟ್ರಪತಿ ಅವರು ಡಿಸ್ಚಾರ್ಜ್ ಆಗಿದ್ದಾರೆ.
ರಾಷ್ಟ್ರಪತಿ ಅವರು ತಮ್ಮ ಬಲಗಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಭಾನುವಾರ ಬೆಳಗ್ಗೆ ಸೇನಾ ಆಸ್ಪತ್ರೆಯಲ್ಲಿ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದ ಕಾರಣ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಅವರ ಎಡಗಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಅಕ್ಟೋಬರ್ 16 2022 ರಂದು ಸೇನಾ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಮಾಡಲಾಗಿತ್ತು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!