Thursday, September 18, 2025

ಭಟ್ಕಳದಲ್ಲಿ ಜಾನುವಾರು ಎಲುಬು ಪತ್ತೆ ಕೇಸ್: ಇಬ್ಬರು ಆರೋಪಿಗಳ ಬಂಧನ

ಹೊಸದಿಗಂತ ವರದಿ, ಭಟ್ಕಳ:

ಭಟ್ಕಳ ನಗರದ ಮುಗ್ದಂ ಕಾಲೋನಿ ಗುಡ್ಡ ಪ್ರದೇಶದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಿ ಎಲಬು ಹಾಗೂ ತ್ಯಾಜ್ಯಗಳನ್ನು ಅರಣ್ಯ ಪ್ರದೇಶದಲ್ಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆಯ ಪೊಲೀಸರು ಇಬ್ಬರನ್ನು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸೆ.11ರಂದು ಉಪವಲಯ ಅರಣ್ಯಾಧಿಕಾರಿ ಮಾರುತಿ ಸೊರಗಾಂವಿ ನೀಡಿದ ದೂರಿನ ಮೇರೆಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ-2020ರ ಕಲಂ 4, 12 ಸೇರಿದಂತೆ ಹಲವು ವಿಧಿಗಳಡಿ ಕಾನೂನು ಕ್ರಮ ಕೈಗೊಳ್ಳಲಾಗಿತ್ತು.

ಮೊಹಮ್ಮದ್ ಸಮಾನ್ (ಮುಗ್ದಂ ಕಾಲೋನಿ ನಿವಾಸಿ) ಹಾಗೂ ಮೊಹಮ್ಮದ್ ರಾಹೀನ್ (ಚೌಥನಿ, ಭಟ್ಕಳ) ಬಂಧಿತ ಆರೋಪಿಗಳಾಗಿದ್ದು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ