VIRAL VIDEO| ಮನೆಗಳಿಗೆ ನುಗ್ಗಿದ ಚಿರತೆ 13ಮಂದಿ ಗಾಯ: ವಾಹನಗಳ ಮೇಲೂ ಅಟ್ಯಾಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹುಲಿ, ಚಿರತೆಗಳು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿರುವ ಘಟನೆಗಳು ಎಲ್ಲೋ ಒಂದು ಕಡೆ ನಡೆಯುತ್ತಲೇ ಇವೆ. ಇಂತಹ ಘಟನೆಗಳಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದಲ್ಲದೆ ಹಲವರು ಆಸ್ಪತ್ರೆ ಪಾಲಾಗಿದ್ದಾರೆ.

ಇತ್ತೀಚೆಗೆ, ಅಸ್ಸಾಂನಲ್ಲಿ ಚಿರತೆಯೊಂದು ದಾಳಿ ಮಾಡಿದೆ. ಅಸ್ಸಾಂನ ಜೋರ್ಹತ್ ಜಿಲ್ಲೆಯಲ್ಲಿ ಸೋಮವಾರ ಚಿರತೆಯೊಂದು ಜನವಸತಿ ಪ್ರದೇಶಕ್ಕೆ ಪ್ರವೇಶಿಸಿದೆ. ಅನೇಕ ಜನರ ಮೇಲೆ ದಾಳಿ ನಡೆಸಿದ್ದು, ಸ್ಥಳೀಯರೊಂದಿಗೆ ಅರಣ್ಯಾಧಿಕಾರಿಗಳು ಸೇರಿ 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಮಕ್ಕಳು ಮಹಿಳೆಯರೂ ಇದ್ದಾರೆ. ಚಿರತೆ ವಾಹನಗಳ ಮೇಲೆ ಅಟ್ಯಾಕ್‌ ಮಾಡಿರುವ ದೃಶ್ಯವನ್ನು ಕೆಲವರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಇದೇ ವೇಳೆ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಎಸ್ಪಿ ತಿಳಿಸಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ಪೊಲೀಸ್ ಹಾಗೂ ಅರಣ್ಯಾಧಿಕಾರಿಗಳು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!