ನ್ಯೂಜಿಲೆಂಡ್ ವಿರುದ್ದ ಎಚ್ಚರಿಕೆಯ ಬ್ಯಾಟಿಂಗ್: 125 ರನ್ ಹಿನ್ನಡೆಯಲ್ಲಿ ಭಾರತ

ಹೊಸದಿಗಂತ ಡಿಜಿಟಲ್ ಡೆಸ್ಕ್; 

ನ್ಯೂಜಿಲೆಂಡ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಭಾರತ 3 ವಿಕೆಟ್ ನಷ್ಟಕ್ಕೆ 231 ರನ್‌ಗಳನ್ನು ಕಲೆಹಾಕಿತು. ಹೀಗಿದ್ದರೂ ಮೊದಲ ಇನ್ನಿಂಗ್ಸ್‌ ಹಿನ್ನಡೆ ತಪ್ಪಿಸಲು ಭಾರತ ಇನ್ನೂ 125 ರನ್‌ಗಳಿಸಬೇಕಿದೆ.

ಪಂದ್ಯದ ಮೂರನೇ ದಿನದ ಎರಡನೇ ಸೆಷನ್‌ನಲ್ಲಿ ಕಿವೀಸ್ ತಂಡವನ್ನು 91.3 ಓವರ್‌ಗಳಲ್ಲಿ 402 ರನ್​ಗಳಿಗೆ ಆಲೌಟ್ ಮಾಡಿ, ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಭಾರತ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡುತ್ತಿದೆ. ನ್ಯೂಜಿಲೆಂಡ್‌ ಬೌಲರ್​ಗಳನ್ನು ಸಮರ್ಥವಾಗಿ ಎದುರಿಸಿದರು.

ಭಾರತ ಪರ, ಯಶಸ್ವಿ ಜೈಸ್ವಾಲ್ 52 ಎಸೆತಗಳಲ್ಲಿ 35 ರನ್ ಗಳಿಸಿ ಔಟಾದರು. ನಾಯಕ ರೋಹಿತ್ ಶರ್ಮಾ 63 ಎಸೆತಗಳಲ್ಲಿ 52 ರನ್ ಗಳಿಸಿ ವಿಕೆಟ್‌ ಒಪ್ಪಿಸಿದರು. ಕೊಹ್ಲಿ 102 ಎಸೆತಗಳಲ್ಲಿ 70 ರನ್ ಬಾರಿಸಿ ದಿನದಾಟದ ಕೊನೆಯಲ್ಲಿ ಕ್ಯಾಚಿತ್ತು ಪೆವಿಲಿಯನ್​ಗೆ ಮರಳಿದರು. ಸರ್ಫರಾಜ್ 78 ಎಸೆತಗಳಲ್ಲಿ 70 ರನ್ ಗಳಿಸಿ ಅಜೇಯರಾಗಿ ಉಳಿದಿದ್ದು, ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದಿರಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ 70 ರನ್‌ಗಳನ್ನು ಸಿಡಿಸಿ ಟೆಸ್ಟ್‌ ಕ್ರಿಕೆಟ್‌ನಲ್ಲಿ 9,000 ರನ್‌ಗಳನ್ನು ಕಲೆ ಹಾಕಿದರು. ಈ ಮೂಲಕ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ರನ್‌ ಗಳಿಸಿದ ನಾಲ್ಕನೇ ಆಟಗಾರರಾಗಿ ಹೊರಹೊಮ್ಮಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!