ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕೆ.ಹಳ್ಳಿಯ ಬೆಂಗಳೂರು ಜಲಮಂಡಳಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಜಂಟಿಯಾಗಿ ಲೋಕಾರ್ಪಣೆಗೊಳಿಸಿದರು.
ಯೋಜನೆಯನ್ನು ಲೋಕಾರ್ಪಣೆಗೊಳಿಸುವುದಕ್ಕೂ ಮುನ್ನ ಚಂಡಿಕಾ ಹೋಮ, ಗಣಪತಿ ಪೂಜೆ, ಯಜಮಾನ ಸಂಕಲ್ಪ, ಮಹಾ ಸುದರ್ಶನ ಚಕ್ರ ಪೂಜೆ, ಸುದರ್ಶನ ಹೋಮ, ಮಹಾಚಂಡಿ ಕಳಾಸರಾಧನೆ, ಮಹಮಂಗಳಾರತಿ ನೆರವೇರಿಸಲಾಯಿತು. ಮಹಾಸಂಕಲ್ಪ, ಚಂಡಿ ನವ ಬ್ರಹ್ಮ ಪೂಜೆ, ದುರ್ಗಾ ಸಪ್ತ ಸತಿ ನಾರಾಯಾಣ ಸೇರಿದಂತೆ 13 ಅಧ್ಯಾಯ, ಗಂಗಾ, ಯಮುನಾ, ಸರಸ್ವತಿ, ನರ್ಮದಾ, ಸಿಂಧು, ಕಾವೇರಿ ಮೊದಲಾದ ಸಪ್ತ ನದಿಗಳ ಕಳಸ ಸ್ಥಾಪನೆ ಮಾಡಿ ಪೂಜೆ ಸಲ್ಲಿಸಲಾಯಿತು. ಮಹಾ ಪೂರ್ಣಾವತಿ, ಮಂಗಳ ದ್ರವ್ಯ ಸಮರ್ಪಣೆ ಮಹಾ ಮಂಗಳಾರತಿ ಸೇರಿ ಹೋಮ-ಹವನ ನೆರವೇರಿಸಲಾಯತು.