ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಇನ್ನೂ 15 ದಿನ ನೀರು ಹರಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದು, ಕರ್ನಾಟಕಕ್ಕೆ ಭಾರೀ ಹಿನ್ನಡೆಯಾಗಿದೆ. ಈ ಬಗ್ಗೆ ಮುಂದಿನ ಕ್ರಮದ ಬಗ್ಗೆ ಮಾತನಾಡಲು ಇಂದು ಸಚಿವ ಸಂಪುಟ ಸಭೆಯನ್ನು ನಡೆಸಲಾಗುತ್ತದೆ.
ಇಂದು ಸಂಜೆ ಆರು ಗಂಟೆಗೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಮಹತ್ವದ ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆ ಇದೆ.
ತೀರ್ಪು ಹೊರಬೀಳುತ್ತಿದ್ದಂತೆಯೇ ರಾಜ್ಯಾದ್ಯಂತ ರೈತರು ಪ್ರತಿಭಟನೆಗೆ ಮುಂದಾಗಿದ್ದು, ಸರ್ಕಾರ ಶೀಘ್ರವೇ ಪರಿಹಾರ ಹುಡುಕಬೇಕಿದೆ.