ಕಾವೇರಿ-ಕೊಡವ ಮಹಿಳೆಯರ ಅವಹೇಳನ ಪ್ರಕರಣ: ಓರ್ವನ ಬಂಧನ

ಹೊಸದಿಗಂತ ವರದಿ,ಮಡಿಕೇರಿ:

ಕೊಡಗಿನ ಕಾವೇರಿ ಹಾಗೂ ಕೊಡವ ಮಹಿಳೆಯರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಮಡಿಕೇರಿ ನಗರ ಠಾಣಾ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ವೀರಾಜಪೇಟೆ ತಾಲೂಕಿನ ಪಾಲಂಗಾಲ ಗ್ರಾಮದ ನಿವಾಸಿ ಕೆ.ಪಿ.ದಿವಿನ್ ದೇವಯ್ಯ (29) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತನ ಮೊಬೈಲ್ ಫೋನ್’ನ್ನು ವಶಕ್ಕೆ ಪಡೆಯಲಾಗಿದೆ.
ಇನ್ಸ್ಟಾಗ್ರಾಂನಲ್ಲಿ ನಕಲಿ ಖಾತೆ ತೆರೆದು ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಅವರ ಮಾರ್ಗದರ್ಶನದಲ್ಲಿ ನಗರ ಠಾಣಾ ಪೊಲೀಸರು ಮಾಹಿತಿ ತಂತ್ರಜ್ಞಾನದ ಮೂಲಕ ತನಿಖೆ ಕೈಗೊಂಡು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.
ಕೊಡಗಿನ ಕಾವೇರಿ ಮಾತೆ ಹಾಗೂ ಕೊಡವ ಮಹಿಳೆಯರ ಅವಹೇಳನ ಮಾಡಿದ ಆರೋಪಿಯನ್ನು ಬಂಧಿಸುವಂತೆ ಕಳೆದ ಹಲವು ದಿನಗಳಿಂದ ಜಿಲ್ಲೆಯಾದ್ಯಂತ ವ್ಯಾಪಕ ಬೇಡಿಕೆ ವ್ಯಕ್ತಗೊಂಡಿತ್ತಲ್ಲದೆ, ಸೋಮವಾರ(ಜು.18) ಜಿಲ್ಲೆಯ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!