ಕಾವೇರಿ 5ನೇ ಹಂತ ಕಾಮಗಾರಿ ಬಹುತೇಕ ಪೂರ್ಣ: ವಿಜಯದಶಮಿಗೆ ಉದ್ಘಾಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾವೇರಿ 5ನೇ ಹಂತದ ಯೋಜನೆ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದ್ದು, ವಿಜಯದಶಮಿ ವೇಳೆ ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಅದಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಡಿಕೆ.ಶಿವಕುಮಾರ್ ಅವರು ಕೆಂಗೇರಿಯಲ್ಲಿ ನಡೆಯುತ್ತಿರುವ ಪೈಪ್‌ಲೈನ್ ಕಾಮಗಾರಿ, ಕನಕಪುರ ತಾಲೂಕಿನ ಹಾರೋಹಳ್ಳಿ ಪಂಪ್ ಸ್ಟೇಷನ್, ಮಳವಳ್ಳಿ ತಾಲೂಕಿನ ತೊರೆಕಡ್ನಹಳ್ಳಿಯ ನೀರು ಶುದ್ಧೀಕರಣ ಘಟಕ ಸೇರಿದಂತೆ ಹಲವು ಪ್ರಮುಖ ಸ್ಥಳಗಳಿಗ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವಿಲೀನಗೊಂಡ 110 ಗ್ರಾಮಗಳ ಜನರ ಕನಸು ಶೀಘ್ರದಲ್ಲೇ ನನಸಾಗಲಿದೆ, ಕಾವೇರಿ ನೀರು ಮನೆ ಬಾಗಿಲಿಗೆ ಸಿಗುತ್ತದೆ ಎಂಬ 15 ವರ್ಷಗಳ ಅವರ ಕನಸು ನನಸಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್‌ನಲ್ಲಿ ಉದ್ಘಾಟನೆ ಮಾಡಲಿದ್ದಾರೆಂದು ಹೇಳಿದರು.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!