ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ಬೆಂಗಳೂರು ಬಂದ್ ಮಾಡಲಾಗಿದೆ. ಸಿಲಿಕಾನ್ ಸಿಟಿ ಅಷ್ಟೇ ಅಲ್ಲದೆ, ರಾಜ್ಯದ ಹಲವೆಡೆ ಕನ್ನಡಪರ ಸಂಘಟನೆಗಳು ಪ್ರತಿಭಟನೆಗಳು ನಡೆಸುತ್ತಿವೆ.
ಕಾವೇರಿ, ಕಬಿನಿ ಹಿತರಕ್ಷಣಾ ಸಮಿತಿ ವತಿಯಿಂದ ಇಂದು ಟಿ.ನರಸೀಪುರ ಬಂದ್ಗೆ ಕರೆ ನೀಡಲಾಗಿದೆ. ಟಿ.ನರಸೀಪುರ ಬಂದ್ಗೆ ಕರೆ ಕೊಟ್ಟಿರುವುದಿರಂದ 20ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಮುಂಜಾಗ್ರತಾ ಕ್ರಮವಾಗಿ ಇಂದು ಸರ್ಕಾರಿ ಅನುದಾನ, ಅನುದಾನ ರಹಿತ ಶಾಲೆಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಬಿಇಒ ಶೋಭಾ ರಜೆ ಘೋಷಿಸಿ ಆದೇಶ ನೀಡಿದ್ದಾರೆ.
ಇತ್ತ ರಾಮನಗರದಲ್ಲೂ ಕಾವೇರಿ ಕೂಗು ಹೆಚ್ಚಾಗಿದೆ. ಐಜೂರು ಸರ್ಕಲ್ ಬಳಿ ಜಯ ಕರ್ನಾಟಕ ಸಂಘಟನೆಯ ಸದಸ್ಯರು ಧರಣಿ ನಡೆಸುತ್ತಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.