ಕಾವೇರಿ ನದಿ ನೀರು ಹಂಚಿಕೆ: ತಮಿಳುನಾಡಿಗೆ ಭೇಟಿ ನೀಡಿ ವರದಿ ಸಲ್ಲಿಸಲು ಸರಕಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾವೇರಿ ನದಿ ನೀರು ಹಂಚಿಕೆ (Cauvery River Water Sharing) ವಿಚಾರವಾಗಿ ತಮಿಳುನಾಡಿಗೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಕರ್ನಾಟಕ ಸಂಪುಟ ಸಮಿತಿಗೆ (Cabinet Committee) ಕಾಂಗ್ರೆಸ್ ಹೈಕಮಾಂಡ್ (Congress High Command) ಸೂಚನೆ ನೀಡಿದೆ.

ಈ ಮಧ್ಯೆ, ಕಂದಾಯ ಸಚಿವ ಕೃಷ್ಣಭೈರೇಗೌಡ ನೇತೃತ್ವದ ರಾಜ್ಯ ಸಂಪುಟ ಸಮಿತಿ ಬುಧವಾರ ಕೇಂದ್ರ ಕೃಷಿ, ಗೃಹ ಕಾರ್ಯದರ್ಶಿ ಭೇಟಿಯಾಗಿ ಮಾತುಕತೆ ನಡೆಸಿದೆ. ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ನೀರು ಬಿಡುವ ಕುರಿತು ನೀಡಿರುವ ಆದೇಶಗಳಿಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ರಾಜ್ಯದಾದ್ಯಂತ ಪ್ರತಿಭಟನೆಗಳೂ ನಡೆಯುತ್ತಿವೆ. ಈ ವಿಚಾರವಾಗಿ ಕರ್ನಾಟಕ ಸುಪ್ರೀಂ ಕೋರ್ಟ್​​ಗೂ ಮೊರೆ ಹೋಗಿತ್ತು.

ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದವು. ಈ ಎಲ್ಲ ಬೆಳವಣಿಗೆಗಳ ನಂತರ ಕಾವೇರಿ ನೀರು ನಿರ್ವಹಣಾ ಸಮಿತಿಯು ಕರ್ನಾಟಕಕ್ಕೆ ತುಸು ರಿಲೀಫ್ ನೀಡುವಂತ ನಿರ್ದೇಶನ ನೀಡಿತ್ತು. ಆದಾಗ್ಯೂ, ಕಾವೇರಿ ಜಲಾನಯನ ಪ್ರದೇಶಗಳಾದ ಮಂಡ್ಯ, ಮೈಸೂರು ಮತ್ತಿತರ ಪ್ರದೇಶಗಳಲ್ಲಿ ರೈತರು ಹಾಗೂ ಹೋರಾಟಗಾರರಿಂದ ಪ್ರತಿಭಟನೆಗಳು ನಡೆಯುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!