ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಕಾವೇರಿ ನದಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಡೆಯಲಿದೆ.
ತಮಿಳುನಾಡಿಗೆ ನೀರು ಹರಿಸಲು ನೀಡಿರುವ ಆದೇಶದ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಮತ್ತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಸಲಿದೆ.
ಸಭೆಯಲ್ಲಿ ಮುಂದಿನ ಅವಧಿಗೆ ನೀರು ಹರಿಸಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಚರ್ಚೆಗಳು ನಡೆಯಲಿದೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಮಳೆಯ ಕೊರತೆಯಿದ್ದು, ಬಹುತೇಕ ತಾಲೂಕುಗಳಲ್ಲಿ ಬರಪರಿಸ್ಥಿತಿ ಇದೆ. ಇದರಿಂದಾಗಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ.