ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಸಂಬಂಧ ಆಕ್ರೋಶ ಇನ್ನಷ್ಟು ಕಾವೇರುತ್ತಿದ್ದು, ಮಂಡ್ಯ ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಹೋರಾಟ ಭುಗಿಲೆದ್ದಿದೆ.
ಈ ಭಾಗದಲ್ಲಿ ರೈತರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಲು ಸಿದ್ಧತೆ ನಡೆಸಿದ್ದಾರೆ.
ಇಂದಿನಿಂದ ಮುಂದಿನ 15 ದಿನಗಳವರೆಗೆ ಪ್ರತಿನಿತ್ಯ 5000 ಕ್ಯೂಸೆಕ್ ನೀರು ಬಿಡಲು ಕಾವೇರಿ ನದಿ ನಿಯಂತ್ರಣ ಸಮಿತಿ ರಾಜ್ಯಕ್ಕೆ ಮತ್ತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಆಕ್ರೋಶಿತಗೊಂಡಿರುವ ರೈತರು ಪ್ರತಿಭಟನೆ, ರಸ್ತೆತಡೆಗೆ ಮುಂದಾಗುತ್ತಿದ್ದಾರೆ.