ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಮತ್ತೆ ಐದು ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಕರ್ನಾಟಕಕ್ಕೆ ಆದೇಶ ಹೊರಡಿಸಿದ್ದು,ಇದರ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ (Siddaramaiah) ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದ್ದು, ನಾಳೆ ಮಧ್ಯಾಹ್ನವೂ ತುರ್ತು ಸಭೆ ಕರೆಯಲಾಗಿದೆ.
ಈ ಸಭೆಗೆ ಸರ್ವ ಪಕ್ಷಗಳಲ್ಲಿನ ಮಾಜಿ ಮುಖ್ಯಮಂತ್ರಿ, ರಾಜ್ಯಸಭಾ ಸದಸ್ಯರು, ಸಂಸದರಿಗೂ ಆಹ್ವಾನ ನೀಡಲಾಗಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾಳೆ ಮಧ್ಯಾಹ್ನ 12.30ಕ್ಕೆ ತುರ್ತು ಸಭೆ ಕರೆಯಲಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್, ಮತ್ತು ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲಾ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ಸಂಪುಟದ ಹಿರಿಯ ಸಚಿವರು, ಲೋಕಸಭೆ ಹಾಗೂ ರಾಜ್ಯಸಭಾ ಸದಸ್ಯರಿಗೆ ಆಹ್ವಾನ ನೀಡಲಾಗಿದೆ.