ತಮಿಳುನಾಡಿಗೆ ಮತ್ತೆ ಕಾವೇರಿ ನೀರು: ಬರೆಯ ಮೇಲೆ ಬರೆ ಎಳೆಯಲಾಗುತ್ತಿದೆ ಎಂದ ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy)ಅವರು ಟ್ವೀಟ್​ ಮೂಲಕ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಕಾವೇರಿ ಜಲ ನಿಯಂತ್ರಣ ಸಮಿತಿ ಸಭೆಯಲ್ಲಿ ಮತ್ತೆ 15 ದಿನ ತಮಿಳುನಾಡಿಗೆ ಪ್ರತಿನಿತ್ಯ 3000 ಕ್ಯೂಸೆಕ್​ ನೀರು ಹರಿಸಲು CWRC ಆದೇಶ ಹೊರಡಿಸಿದೆ. ಇದು ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತವಾಗಿದೆ ಎಂದಿದ್ದಾರೆ.

ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ, ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ನೀರು ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ಸರ್ಕಾರವಿದೆ. ತಮಿಳುನಾಡಿಗೆ ನೀರು ಬಿಡಲ್ಲ ಎನ್ನುವ ಎದೆಗಾರಿಕೆ ಸರ್ಕಾರಕ್ಕೆ ಇಲ್ಲ. ಮಳೆಯ ಕೊರತೆಯಿಂದ ರಾಜ್ಯದ ಜಲಾಶಯಗಳೆಲ್ಲ ಖಾಲಿ ಆಗಿವೆ. ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತಿದೆ. ಇಂತಹ ಜಲಾಘಾತಗಳನ್ನು ಕೊಡುವುದಕ್ಕಾಗಿಯೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಲಾಗಿದೆಯೇ?. ಈ ಆದೇಶಗಳು ಸಂವಿಧಾನ, ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ನಮ್ಮದು ಎಂದು ವಾಗ್ದಾಳಿ ನಡೆಸಿದರು.

ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ, ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ. ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದ ರೈತರ ಒಂದು ಬೆಳೆಗೂ ಸಮರ್ಪಕವಾಗಿ ನೀರು ಹರಿದಿಲ್ಲ. ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ.ಕನ್ನಡಿಗರೂ ಮನುಷ್ಯರು, ಅವರಿಗೂ ಅನ್ನ ನೀರು ಬೇಕು. ಅವರೂ ಈ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಸಮಿತಿ ಮರೆತಿರುವಂತಿದೆ. ಸರಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ. ಈ ಆದೇಶವನ್ನು ದಿಕ್ಕರಿಸುವ ಎದೆಗಾರಿಕೆ ಸರಕಾರಕ್ಕೆ ಇಲ್ಲ. ಜನರು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು, ಜನರ ಜತೆ ನಾವಿದ್ದೇವೆ, ನಮ್ಮ ಪಕ್ಷವೂ ಇದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!