ಕಾವೇರಿ ನೀರು ವಿವಾದ: ಸೋಮವಾರ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಿಗದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಕಾವೇರಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಿಗದಿಯಾಗಿದೆ.

ಸೋಮವಾರ ಮಧ್ಯಾಹ್ನ 2 ಗಂಟೆಗೆ ಸಭೆ ನಡೆಯಲಿದ್ದು, ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಸಮಿತಿ ನಿರ್ಧಾರ ಕೈಗೊಳ್ಳಲಿದೆ.

ಅಕ್ಟೋಬರ್ ಅಂತ್ಯದವರೆಗೆ ಕರ್ನಾಟಕ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯೂಸೆಕ್​ ನೀರು ಹರಿಸಲು CWRC ಇತ್ತೀಚೆಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಹರಿಸಲಾಗುತ್ತಿದ್ದು, ಸೋಮವಾರದ ಸಭೆಯಲ್ಲಿ ಸಮಿತಿ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!