Wednesday, September 27, 2023

Latest Posts

ಕಾವೇರಿ ನೀರು ವಿವಾದ: ಮಂಡ್ಯದಲ್ಲಿ ಮತ್ತೆ ಭುಗಿಲೆದ್ದ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ (ಸಿಡಬ್ಲ್ಯೂಆರ್‌ಸಿ) ಕರ್ನಾಟಕಕ್ಕೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮಂಡ್ಯ, ಕೆಆರೆಎಸ್‌ ಜಲಾಶಯದ ಸುತ್ತಮುತ್ತ ಪ್ರತಿಭಟನೆಗಳ ಬಿಸಿ ಹೆಚ್ಚಾಗತೊಡಗಿದೆ.

ರೈತರು, ರೈತ ಪರ ಸಂಗಟನರಗಳು, ಕನ್ನಡ ಪರ ಸಂಘಟನೆಗಳು ಈಗಾಗಲೇ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗದುಕೊಂಡಿದ್ದು, ಕಾವೇರಿ ನೀರಿಗಾಗಿ ಉಗ್ರ ಹೋರಾಟದ ಎಚ್ಚರಿಕೆಯನ್ನೂ ನೀಡಿದ್ದಾರೆ. ಆದರೂ ತಮಿಳುನಾಡಿಗೆ ಕಾವೇರಿ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ಕೂಡ ಪ್ರತಿಬಟನೆಗಳು ನಡೆಯುತ್ತಿವೆ.

ಮಂಡ್ಯದ ಸಂಜಯ್ ವೃತ್ತದಲ್ಲಿ ರೈತರು ಮತ್ತು ಕನ್ನಡ ಪರ ಹೋರಾಟಗಾರರು ಪಾತ್ರೆಗಳನ್ನಿಡಿದು ವಿನೂತನ ಪ್ರತಿಭಟನೆ ನಡೆಸಿದರು. ಹಿರಿಯ ನಾಗರೀಕರೊಬ್ಬರು ಅರೆಬೆತ್ತಲೆಯಾಗಿ ಬಾಯಿ ಬಡಿದುಕೊಂಡು ಕಾವೇರಿ ನಮ್ಮದು, ಅಯ್ಯಯ್ಯೋ ಅನ್ಯಾಯ ಎಂದು ಘೋಷಣೆ ಕೂಗಿದ್ದು ಕಂಡುಬಂತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!