ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರಿನ ವಿಚಾರವಾಗಿ ಕರ್ನಾಟಕದ ರೈತ ಸಂಘಟನೆಗಳು ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿವೆ.
ನಾವು ಬೆಳೆಗೆ ನೀರು ಕೇಳುತ್ತಿಲ್ಲ. ಬದಲಿಗೆ ಕುಡಿಯುವ ನೀರಿಗೆ ಆದ್ಯತೆ ಕೊಡಿ. ತಮಿಳುನಾಡು ರಾಜ್ಯ ಸರ್ಕಾರ ಕುರುವೈ ಬೆಳೆಗೆ ನೀರು ಕೇಳುತ್ತಿದೆ. ಮಂಡ್ಯ, ಮೈಸೂರು ಸುತ್ತಮುತ್ತ 3 ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ತಂಡ ತಮಿಳುನಾಡಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದೆ. ಆದರೆ, ಕರ್ನಾಟಕಕ್ಕೆ ಭೇಟಿ ನೀಡಿಲ್ಲ ಎಂದು ರೈತ ಸಂಘಟನೆಗಳು ಅರ್ಜಿಯಲ್ಲಿ ಉಲ್ಲೇಖಿಸಿವೆ.
ರೈತ ಸಂಘಟನೆಗಳ ಅರ್ಜಿ ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬರಲಿದೆ.