ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2 ಗಂಟೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ.
ತಮಿಳುನಾಡಿಗೆ 2600 ಕ್ಯೂಸೆಕ್ ನೀರು ಹರಿಸುವಂತೆ CWRC ಸೂಚನೆ ನೀಡಿದ್ದು, ಈ ಆದೇಶವನ್ನು ಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮಹತ್ವದ ಸಭೆ ನಡೆಯಲಿದೆ.
ಇದಕ್ಕೂ ಮುನ್ನ ಅ.31ರ ವರೆಗೆ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ CWMA ಹೇಳಿತ್ತು. ಬಳಿಕ ಮುಂದಿನ 15 ದಿನ ತಮಿಳುನಾಡಿಗೆ ಮತ್ತೆ 2600 ಕ್ಯೂಸೆಕ್ ನೀರು ಹರಿಸುವಂತೆ CWRC ಕರ್ನಾಟಕಕ್ಕೆ ಸೂಚನೆ ನೀಡಿತ್ತು.
ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕವು ಮನವಿ ಸಲ್ಲಿಸಿದ್ದು, ಇಂದು ಮಧ್ಯಾಹ್ನ
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ.