ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ನಾಳೆ ಮಹತ್ವದ ಸಭೆಯನ್ನು ನಡೆಸಲಿದೆ.
ನಾಳೆ ಮಧ್ಯಾಹ್ನ 2 ಗಂಟೆಗೆ ಸಭೆ ನಿಗದಿಯಾಗಿದ್ದು, ವರ್ಚುವಲ್ ಮೂಲಕ ನಡೆಯುವ ಈ ಸಭೆಯಲ್ಲಿ CWRC ನೀಡಿದ್ದ ಆದೇಶವನ್ನು ಪರಿಶೀಲಿಸಲಾಗುತ್ತದೆ.
ಕಾವೇರಿ ನೀರುವ ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಿನ್ನೆ ಸಭೆ ನಡೆಸಿತ್ತು. ಸಭೆಯಲ್ಲಿ ಮುಂದಿನ 15 ದಿನಗಳ ಕಾಲ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ CWRC ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮಹತ್ವದ ಸಭೆ ನಾಳೆ ನಿಗದಿಯಾಗಿದೆ.