Sunday, December 3, 2023

Latest Posts

ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಡೆಯಲಿದೆ.

ಇಂದು ಮಧ್ಯಾಹ್ನ 2 ಗಂಟೆಗೆ ಸಭೆ ನಡೆಯಲಿದ್ದು, ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಸಮಿತಿ ನಿರ್ಧಾರ ಕೈಗೊಳ್ಳಲಿದೆ.

ಅಕ್ಟೋಬರ್ ಅಂತ್ಯದವರೆಗೆ ಕರ್ನಾಟಕ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯೂಸೆಕ್​ ನೀರು ಹರಿಸಲು CWRC ಇತ್ತೀಚೆಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಹರಿಸಲಾಗುತ್ತಿದ್ದು, ಸೋಮವಾರದ ಸಭೆಯಲ್ಲಿ ಸಮಿತಿ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!