ಕಾವೇರಿ ನೀರು ಹಂಚಿಕೆ ಬಿಕ್ಕಟ್ಟು: ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾವೇರಿ ನೀರು ಹಂಚಿಕೆ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೂಡಲೇ ಮಧ್ಯೆ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಅವರು, ಕೆಆರ್‌ಎಸ್‌ನಲ್ಲಿ 113 ಅಡಿ ನೀರು ಬಂದಿದೆ. ಹಾರಂಗಿ ಕಬಿನಿಯಲ್ಲಿ ನೀರು ಬರಬೇಕಿತ್ತು. ಆದರೆ ಮಳೆ ಕೊರತೆಯಿಂದ ನೀರಿನ ಕೊರತೆ ಕಾಡಿದೆ. ಮೇಕೆದಾಟು ವಿಚಾರವಾಗಿ ಅನಗತ್ಯ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಹೇಳಿದರು.

105 ತಾಲೂಕುಗಳಲ್ಲಿ ಶೀಘ್ರ ಬರ ಘೋಷಣೆ ಮಾಡಲಾಗುವುದು. ಈ ಸಂಬಂಧ ಸೆಪ್ಟೆಂಬರ್ 4ರಂದು ಸಚಿವ ಸಂಪುಟದ ಉಪ ಸಮಿತಿ ಸಭೆ ನಡೆಯಲಿದೆ. ಒಟ್ಟು 114 ತಾಲೂಕುಗಳಲ್ಲಿ ಜಂಟಿ ಸಮೀಕ್ಷೆ ಆಗಿದೆ. 105 ತಾಲೂಕುಗಳಲ್ಲಿ ಬರ ಘೋಷಣೆ ಮಾಡಲಾಗುವುದು. ನಂತರ 73 ತಾಲೂಕುಗಳ ಘೋಷಣೆಗೆ ಸೇರ್ಪಡೆ ಮಾಡಲಾಗುವುದು ಎಂದು ತಿಳಿಸಿದರು.

ಒಂದು ದೇಶ ಒಂದು ಚುನಾವಣೆ ಕುರಿತು ಮಾತನಾಡಿದ ಆರು, ಇದರ ಜಾರಿ ಎಲ್ಲ ರಾಜ್ಯಗಳಿಗೆ ಕಷ್ಟ ಆಗಲಿದೆ ಎನ್ನುವುದು ನನ್ನ ವೈಯಕ್ತಿಕ ವಿಚಾರ. ವಿಧಾನಸಭೆ ಸೇರಿದಂತೆ ಸ್ಥಳೀಯ ಚುನಾವಣೆಗಳನ್ನು ನಡೆಸುವುದು ಸುಲಭವಲ್ಲ. ಮಾಜಿ ರಾಷ್ಟ್ರಪತಿ ಕೋವಿಂದ್ ಅವರ ನೇತೃತ್ವದ ಸಮಿತಿ ವರದಿ ನೀಡಲಿ ಎಂದು ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!