ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWRC ಕರ್ನಾಟಕಕ್ಕೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಲಿದೆ.
ಇಂದು ಮಧ್ಯಾಹ್ನ 12:30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಿಶೇಷ ತುರ್ತು ಸಭೆ ನಡೆಯಲಿದೆ. ಈ ಸಭೆಯಲ್ಲಿ ಸರ್ವ ಪಕ್ಷಗಳಲ್ಲಿನ ಮಾಜಿ ಮುಖ್ಯಮಂತ್ರಿ, ರಾಜ್ಯಸಭಾ ಸದಸ್ಯರು, ಸಂಸದರು ಭಾಗಿಯಾಗಲಿದ್ದಾರೆ.
ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಮತ್ತೆ ಮುಂದಿನ 15 ದಿನಗಳವರೆಗೆ ಪ್ರತಿದಿನ 5000 ಕ್ಯೂಸೆಕ್ ನೀರು ಹರಿಸಲು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮಂಗಳವಾರ ರಾತ್ರಿಯೇ ಸಂಪುಟ ಸಹೋದ್ಯೋಗಿಗಳು, ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಲ್ಲದೆ ಬುಧವಾರ ಮಧ್ಯಾಹ್ನ ವಿಶೇಷ ತುರ್ತು ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಭೆ ನಡೆಯಲಿದೆ.