ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರು ಹಂಚಿಕೆ ವಿವಾದ ಸೃಷ್ಟಿಯಾಗಿರುವ ಹಿನ್ನೆಲೆ ಇಂದು ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ.
ದೆಹಲಿಯ ತಾಜ್ ಮಾನ್ ಸಿಂಗ್ ಹೋಟೆಲ್ನಲ್ಲಿ ನಡೆಯುವ ಸಭೆಯಲ್ಲಿಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯದ ಸಂಸದರು, ಕೇಂದ್ರ ಸಚಿವರು, ರಾಜ್ಯಸಭಾ ಸದಸ್ಯರು ಭಾಗಿಯಾಗಿಯಾಗಲಿದ್ದಾರೆ.
ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರು ಹರಿಸುವುದನ್ನು ಮುಂದುವರೆಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಆದರೆ ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಈ ಹಿನ್ನೆಲೆಯಲ್ಲಿ ಕಾನೂನು ತಜ್ಞರ ಜೊತೆ ಇಂದು ಸಿಎಂ ಸಭೆ ನಡೆಸಲಿದ್ದಾರೆ.