ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಇಂದು ತ್ರಿಸದಸ್ಯ ಪೀಠ ರಚನೆ ಮಾಡಿದೆ.
ಕರ್ನಾಟಕಕ್ಕೆ ನೀರು ಬಿಡುವಂತೆ ಸೂಚಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಪ್ರತ್ಯೇಕ ಪೀಠ ರಚನೆಗೆ ನಿನ್ನೆ ಒಪ್ಪಿಗೆ ನೀಡಿತ್ತು. ಅದರಂತೆ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಮೂರ್ತಿ ಪಿಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಬಿಕೆ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ರಚನೆ ಮಾಡಿದ್ದು ಶುಕ್ರವಾರದಿಂದ ವಿಚಾರಣೆ ನಡೆಯಲಿದೆ.