ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ನೀರು (Water For Tamil Nadu) ಬಿಡುವಂತೆ ಸುಪ್ರೀಂ ಕೋರ್ಟ್ (Supreme Court) ಆದೇಶ ನೀಡಿದ್ದು, ಇದರ ಬೆನ್ನಲ್ಲೇ ರಾಜ್ಯದಲ್ಲಿ ಆಕ್ರೋಶ ಹೆಚ್ಚಾಗಿದ್ದು, ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಶನಿವಾರ ಮಂಡ್ಯ ಜಿಲ್ಲೆಯ ಬಂದ್‌ಗೆ ಕರೆ ನೀಡಿದೆ.
ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರೊಂದಿಗೆ ಗುರುವಾರ (ಇಂದು) ನಡೆದ ಸಭೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಬಂದ್ ನಿರ್ಧಾರ ಕೈಗೊಂಡಿದೆ. ಶುಕ್ರವಾರ (ಸೆ.22) ಮತ್ತೊಂದು ಸುತ್ತಿನ ಸಭೆಯಲ್ಲಿ ಬಂದ್ (Mandya Bandh) ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ.